Indian Politics
ಪಿಣರಾಯಿ ವಿಜಯನ್ ಪುತ್ರಿ ವೀಣಾ ಸಂಬಂಧಿತ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಪಿಣರಾಯಿ ವಿಜಯನ್ ಪುತ್ರಿ ವೀಣಾ ಸಂಬಂಧಿತ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

prajavani1h
THE BRIEF
1

ಲಂಚ ಪಾವತಿ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್, ಪುತ್ರಿ ವೀಣಾ ಟಿ ಹಾಗೂ ಅಳಿಯ ಮೊಹಮ್ಮದ್ ರಿಯಾಸ್ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ಒಂದು ವಾರ ತಡೆ ನೀಡಿದೆ.

2

ಸಿಎಂಆರ್‌ಎಲ್ ಕಂಪನಿಯಿಂದ ವೀಣಾ ಅವರ ಎಕ್ಸಾಲಾಜಿಕ್ ಸಲೂಷನ್ಸ್‌ಗೆ ಅಕ್ರಮವಾಗಿ ₹2.78 ಕೋಟಿ ಸಂದಾಯವಾಗಿದೆ ಎಂಬುದು ಇಡಿ ಆರೋಪವಾಗಿದೆ.

3

ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಆರೋಪಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.