
ಲಂಚ ಪಾವತಿ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್, ಪುತ್ರಿ ವೀಣಾ ಟಿ ಹಾಗೂ ಅಳಿಯ ಮೊಹಮ್ಮದ್ ರಿಯಾಸ್ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ಒಂದು ವಾರ ತಡೆ ನೀಡಿದೆ.
ಸಿಎಂಆರ್ಎಲ್ ಕಂಪನಿಯಿಂದ ವೀಣಾ ಅವರ ಎಕ್ಸಾಲಾಜಿಕ್ ಸಲೂಷನ್ಸ್ಗೆ ಅಕ್ರಮವಾಗಿ ₹2.78 ಕೋಟಿ ಸಂದಾಯವಾಗಿದೆ ಎಂಬುದು ಇಡಿ ಆರೋಪವಾಗಿದೆ.
ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಆರೋಪಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.