
ಭಾರತೀಯ ಹವಾಮಾನ ಇಲಾಖೆಯು ಜುಲೈ 28 ಮತ್ತು 29ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.
ಕಳೆದ 24 ಗಂಟೆಗಳಲ್ಲಿ ಕೊಲ್ಲೂರಿನಲ್ಲಿ 7 ಸೆಂ.ಮೀ., ಆಗುಂಬೆಯಲ್ಲಿ 5 ಸೆಂ.ಮೀ. ಮತ್ತು ಮೂಡುಬಿದಿರೆಯಲ್ಲಿ 4 ಸೆಂ.ಮೀ. ಮಳೆಯಾಗಿದ್ದು, ಗಾಳಿಯ ವೇಗ ಗಂಟೆಗೆ 30-50 ಕಿ.ಮೀ. ಇರಲಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ನದಿ-ಹಳ್ಳಗಳ ಸಮೀಪ ಹೋಗದಂತೆ ವಿಪತ್ತು ನಿರ್ವಹಣಾ ಕೇಂದ್ರ ಎಚ್ಚರಿಕೆ ನೀಡಿದೆ.