
ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ್ದ 40 ಅಡಿ ಟಿಪ್ಪು ಸುಲ್ತಾನ್ ಕಟೌಟ್ ವಿಡಿಯೋಗೆ ಪಾಕಿಸ್ತಾನಿ ಹಾಡು ಬಳಸಿ ವೈರಲ್ ಮಾಡಿದ ಪ್ರಕರಣ ದಾಖಲಾಗಿದೆ.
‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 196 ಹಾಗೂ 299 ಅಡಿಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಾಗಿದೆ.
ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅವರು ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.