
ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಮಾಡ್ಯುಲರ್ ಶಸ್ತ್ರಚಿಕಿತ್ಸಾ ಕೊಠಡಿಗಳಿಗೆ ಅಗತ್ಯವಿರುವ ಬಾಕಿ ಉಪಕರಣಗಳಿಗೆ ರೂ. 6 ಕೋಟಿ ಅನುದಾನ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ಸಚಿವರು ಆಸ್ಪತ್ರೆಯ ಹೃದ್ರೋಗ ವಿಭಾಗ ಹಾಗೂ ಕ್ಯಾಥ್ಲ್ಯಾಬ್ ಸೌಲಭ್ಯಗಳನ್ನು ದಿಢೀರ್ ಪರಿಶೀಲನೆ ನಡೆಸಿದರು.
ನಂತರ ಆಯನೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ವಿತರಿಸಿರುವ ಶೂ ಮತ್ತು ಸಾಕ್ಸ್ ಗುಣಮಟ್ಟವನ್ನು ಪರಿಶೀಲಿಸಿದರು.