
ದೆಹಲಿ ಹೈಕೋರ್ಟ್ 'ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗೆಸಿ' ಚಿತ್ರದ ಟೀಸರ್ ಮತ್ತು ಪ್ರಚಾರದ ಲಿಂಕ್‌ಗಳನ್ನು ತಕ್ಷಣವೇ ಡಿಲೀಟ್ ಮಾಡುವಂತೆ ನಿರ್ಮಾಪಕರಿಗೆ ಆದೇಶಿಸಿದೆ.
1998ರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಸಲ್ಮಾನ್ ಖಾನ್ ಅವರೊಂದಿಗೆ ನೇರವಾಗಿ ಲಿಂಕ್ ಮಾಡಿ ಅವರ ಗೌರವಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಪೀಠ ಅಭಿಪ್ರಾಯಪಟ್ಟಿದೆ.
ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರನ್ನೇ ಹೋಲುವ ನಟ ಮತ್ತು ಬ್ಲೂ ಬ್ರೇಸ್‌ಲೆಟ್ ಬಳಸಿರುವುದು ವ್ಯಕ್ತಿತ್ವದ ಹಕ್ಕಿನ ಉಲ್ಲಂಘನೆ ಎಂದು ನಟನ ವಕೀಲರು ವಾದಿಸಿದ್ದರು.