
ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಪ್ರಯಾಣಿಕರೊಬ್ಬರ ಪರವಾನಗಿ ಪಡೆದ ಪಿಸ್ತೂಲು ಆಕಸ್ಮಿಕವಾಗಿ ಸಿಡಿದಿದೆ.
ಈ ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ನ್ಯೂ ಲಕ್ಷ್ಮಿ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ.
ಅಜಂಗಢದ ಕಮಲೇಶ್ ರಾಯ್ ಎಂಬ ಪ್ರಯಾಣಿಕರು ಮುಂಬೈಗೆ ತೆರಳಲು ಬಂದಿದ್ದಾಗ ಈ ಅವಘಡ ಸಂಭವಿಸಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.