ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು KA03 KQ6190 ನೋಂದಣಿ ಸಂಖ್ಯೆಯ ಸ್ಕೂಟರ್‌ನಲ್ಲಿ ಬಂದು ಮಹಿಳೆಯನ್ನು ನಿಂದಿಸಿದ್ದಲ್ಲದೆ, ಅಸಭ್ಯವಾಗಿ ಪ್ರಶ್ನಿಸಿ ಸ್ಥಳದಿಂದ ಪರಾರಿಯಾಗಿದ್ದನು.
ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ದೂರು ನೀಡಿದ ಬೆನ್ನಲ್ಲೇ, ಪೂರ್ವ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.