
ಬಾಗಲಕೋಟೆ ಜಿಲ್ಲೆಯ ರಬಕವಿಯಲ್ಲಿ ರಸ್ತೆ ಗುಂಡಿಗೆ ಬೈಕ್ ಬಿದ್ದ ಪರಿಣಾಮ ಕೆಳಗೆ ಬಿದ್ದ ತಬಸ್ಸುಮ್ ನದಾಫ್ (25) ಎಂಬ ಮಹಿಳೆಯ ಕಾಲಿನ ಮೇಲೆ ಟಿಪ್ಪರ್ ಹರಿದು ಎಡಗಾಲು ಕಟ್ ಆಗಿದೆ.
ಚಿತ್ತರಗಿ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮಹಿಳೆ ರಸ್ತೆಗೆ ಬಿದ್ದಾಗ, ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಅವರ ಕಾಲಿನ ಮೇಲೆ ಹರಿದಿದೆ.
ಈ ಭೀಕರ ಅಪಘಾತದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ರಸ್ತೆಯ ಅವೈಜ್ಞಾನಿಕ ತಗ್ಗು-ಗುಂಡಿಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.