
ಕರ್ನಾಟಕದ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನವನ್ನು AI ಯುಗಕ್ಕೆ ತಕ್ಕಂತೆ ಡಿಜಿಟಲ್ ವೇದಿಕೆಗೆ ತರಲು ಸರ್ಕಾರ ನಿರ್ಧರಿಸಿದೆ.
ಮಂಗಳೂರಿನಲ್ಲಿ ಯಕ್ಷಗಾನ ವಿದ್ಯುನ್ಮಾನ ದಾಖಲೆಗಳ ಸಂಗ್ರಹಾಲಯ (ಯಕ್ಷಗಾನ ಡಿಜಿಟಲ್ ಆರ್ಕೈವ್ಸ್) ಸ್ಥಾಪನೆಗೆ 9.5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ.
ಈ ಯೋಜನೆಯು ಯಕ್ಷಗಾನ ಕಲೆಯನ್ನು ಮುಂದಿನ ತಲೆಮಾರಿಗೆ ತಲುಪಿಸುವುದರ ಜೊತೆಗೆ ಜಾಗತಿಕ ಪ್ರೇಕ್ಷಕರಿಗೆ ಪರಿಚಯಿಸುವ ಗುರಿ ಹೊಂದಿದೆ.