
ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಆಗಸ್ಟ್ 18ರವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಭಾನುವಾರ ವ್ಯಾಪಕ ಮಳೆಯಾಗಲಿದ್ದು, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲೂ ಮಳೆ ಮುಂದುವರಿಯಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಆಗಸ್ಟ್ 17 ಮತ್ತು 18ರಂದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.