
ಉತ್ತರ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವು ರೂಪುಗೊಳ್ಳುತ್ತಿದ್ದು, ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದರ ಪ್ರಭಾವದಿಂದ ಮುಂಬರುವ ದಿನಗಳಲ್ಲಿ ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯತ್ತ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
ಕರ್ನಾಟಕದಾದ್ಯಂತ ಹಾಗೂ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಗುಡುಗು-ಸಿಡಿಲು ಸಹಿತ ಮಳೆ ಮುಂದುವರಿಯಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.