ಸಚಿವ ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಬೀದರ್ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ತುಮಕೂರಿನ ಸಿದ್ದಗಂಗಾ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿ ಮತ್ತು ಮೂರು ಬಾರಿ ಸಚಿವರಾಗಿ ಅನುಭವ ಹೊಂದಿರುವ ಖಂಡ್ರೆ ಅವರಿಗೆ ಡಿಸಿಎಂ ಸ್ಥಾನ ನೀಡುವಂತೆ ಕಾರ್ಯಕರ್ತರು ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲ್ ಅವರ ಹೆಸರುಗಳೂ ಡಿಸಿಎಂ ಹುದ್ದೆಯ ರೇಸ್‌ನಲ್ಲಿ ಕೇಳಿಬರುತ್ತಿದ್ದು, ಸಂಪುಟ ವಿಸ್ತರಣೆಯ ಚರ್ಚೆ ಜೋರಾಗಿದೆ.