
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ತಿಮ್ಮಾಪುರ ಗ್ರಾಮದ ಶ್ರೇಯಾ ಎನ್. ಗೌಡ ಅವರು ಯುಪಿಎಸ್ಸಿ ಎನ್ಡಿಎ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.
ಶ್ರೇಯಾ ಅವರ ತಂದೆ ನಾಗೇಂದ್ರ ಜೆ. ವಿಐಎಸ್ಎಲ್ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದರೆ, ತಾಯಿ ಡಾ. ಆಶಾ ಬಿ.ಎಂ. ಅತಿಥಿ ಉಪನ್ಯಾಸಕಿಯಾಗಿದ್ದಾರೆ.
ಈ ಸಾಧನೆಗೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಕ್ಸ್ ಖಾತೆಯ ಮೂಲಕ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.