
ಗಾಂಧಿ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಗಾಂಧೀಜಿಯವರ 157ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಜ್‌ಘಾಟ್‌ನಲ್ಲಿ ಸರ್ವಧರ್ಮ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು.
ಸತ್ಯ, ಅಹಿಂಸೆ ಮತ್ತು ಸೇವೆಯ ಆದರ್ಶಗಳು ಇಂದಿಗೂ ಜನರಿಗೆ ದಾರಿ ತೋರಿಸುತ್ತಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.