
ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿದ ಕಾರಣಕ್ಕೆ ಟ್ರೋಲ್ ಆಗಿದ್ದ ಭಾರತೀಯ ಮಹಿಳಾ ಕ್ರಿಕೆಟರ್ ಶ್ರೇಯಾಂಕಾ ಪಾಟೀಲ್, ಟೀಕಾಕಾರರಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ತಮ್ಮ ವೈಯಕ್ತಿಕ ಆಯ್ಕೆಗಳನ್ನು ಮತ್ತು ನೃತ್ಯವನ್ನು ಪ್ರೀತಿಸುವುದಾಗಿ ತಿಳಿಸಿದ ಅವರು, ಟ್ರೋಲ್ಗಳನ್ನು ನಕಾರಾತ್ಮಕವಾಗಿ ನೋಡದೆ ಧನಾತ್ಮಕವಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ.
ಗಾಯದ ಕಾರಣದಿಂದ ಏಷ್ಯಾ ಕಪ್ನಿಂದ ಹೊರಗುಳಿದಿರುವ ಶ್ರೇಯಾಂಕಾ, 2026ರ ಏಷ್ಯನ್ ಗೇಮ್ಸ್ಗಾಗಿ ಪ್ರಕಟಿಸಲಾದ ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.