
ತಿರುವನಂತಪುರದ ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜನವರಿ 2023 ರಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 390 ರನ್ ಕಲೆಹಾಕಿತ್ತು.
ಶುಭ್ಮನ್ ಗಿಲ್ 97 ಎಸೆತಗಳಲ್ಲಿ 116 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 110 ಎಸೆತಗಳಲ್ಲಿ 13 ಬೌಂಡರಿ ಹಾಗೂ 8 ಸಿಕ್ಸರ್ಗಳೊಂದಿಗೆ 166 ರನ್ ಗಳಿಸಿ ಅಜೇಯರಾಗಿ ಉಳಿದರು.
ಬೌಲಿಂಗ್ನಲ್ಲಿ ಮೊಹಮ್ಮದ್ ಸಿರಾಜ್ 32 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದ್ದರಿಂದ ಶ್ರೀಲಂಕಾ ತಂಡವು 73 ರನ್ಗಳಿಗೆ ಆಲೌಟ್ ಆಯಿತು.