
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮತ್ತೊಂದು ವಿವೋ ಕಂಪನಿಯ ಮೊಬೈಲ್ ಫೋನ್ ಪತ್ತೆಯಾಗಿದ್ದು, ಜೈಲು ಅಧಿಕಾರಿಗಳು ಅದನ್ನು ವಶಕ್ಕೆ ಪಡೆದಿದ್ದಾರೆ.
ಈ ಮೊಬೈಲ್ ಫೋನ್ ದೇವರ ಫೋಟೋದ ಹಿಂದೆ ಅಡಗಿಸಿಡಲಾಗಿತ್ತು ಮತ್ತು ಸಿಮ್ ಕಾರ್ಡ್ ಇಲ್ಲದೆ ಸ್ವಿಚ್ ಆಫ್ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಜೈಲಿನಲ್ಲಿ ಮೊಬೈಲ್ ಬಳಸುತ್ತಿದ್ದವರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.