Health & Environment
ಕರ್ನಾಟಕದಲ್ಲಿ ಚುರುಕುಗೊಂಡ ಮುಂಗಾರು: ಆಗಸ್ಟ್ 13ರವರೆಗೆ ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಚುರುಕುಗೊಂಡ ಮುಂಗಾರು: ಆಗಸ್ಟ್ 13ರವರೆಗೆ ಮಳೆ ಮುನ್ಸೂಚನೆ

tv9kannada2h
THE BRIEF
1

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಆಗಸ್ಟ್ 13ರವರೆಗೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2

ಆಗಸ್ಟ್ 10 ಮತ್ತು 11ರಂದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಆಗಸ್ಟ್ 12 ಮತ್ತು 13ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

3

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಮಳೆಯಾಗುತ್ತಿದ್ದು, ಮೆಜೆಸ್ಟಿಕ್ ಮತ್ತು ವೈಟ್​​ಫೀಲ್ಡ್ ಭಾಗಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ.