
ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಆಗಸ್ಟ್ 13ರವರೆಗೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 10 ಮತ್ತು 11ರಂದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಆಗಸ್ಟ್ 12 ಮತ್ತು 13ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಮಳೆಯಾಗುತ್ತಿದ್ದು, ಮೆಜೆಸ್ಟಿಕ್ ಮತ್ತು ವೈಟ್ಫೀಲ್ಡ್ ಭಾಗಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ.