
ಆರ್ಎಸ್ಎಸ್ ಮತ್ತು ಬಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಈ ಖಾಸಗಿ ದೂರನ್ನು ವಜಾಗೊಳಿಸಿತ್ತು, ಇದೀಗ ವಿಶೇಷ ಕೋರ್ಟ್ ಆ ಆದೇಶವನ್ನು ಎತ್ತಿ ಹಿಡಿದು ಅರ್ಜಿದಾರ ಕಿರಣ್ ಅವರ ಮನವಿಯನ್ನು ತಿರಸ್ಕರಿಸಿದೆ.
ಸದನದಲ್ಲಿ ನೀಡಿದ ಹೇಳಿಕೆಗೆ ಸಂವಿಧಾನದ 194(2)ನೇ ವಿಧಿಯಡಿ ರಕ್ಷಣೆಯಿದೆ ಎಂಬ ಸಿದ್ದರಾಮಯ್ಯ ಪರ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.