
ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 28 ವರ್ಷದ ಸೈಯದ್ ಅಬೂಬಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಪಾಕಿಸ್ತಾನದ ಶಾಜದ್ ಬುಟ್ಟಿ ನೆಟ್‌ವರ್ಕ್‌ನ 'Hammadmemon333' ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ಬಳಸುತ್ತಿದ್ದು, ಕೇರಳ ಮತ್ತು ದೆಹಲಿಯಲ್ಲಿ ರಹಸ್ಯ ತರಬೇತಿಯನ್ನೂ ಪಡೆದಿದ್ದನು.
ಈತನ ವಿರುದ್ಧ ಬಿಎನ್‌ಎಸ್ ಸೆಕ್ಷನ್ 113(3) ಮತ್ತು 197(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ದೇಶವಿರೋಧಿ ಚಟುವಟಿಕೆಗಳ ಜಾಲದ ಬಗ್ಗೆ ತನಿಖೆ ಚುರುಕುಗೊಂಡಿದೆ.