
ಬೆಂಗಳೂರಿನ ಚಿಕ್ಕಬಾಣಾವರದ ಗುಟ್ಟೆ ಬಸವೇಶ್ವರ ಲೇಔಟ್ನಲ್ಲಿ ಗಂಡ ಮತ್ತು 5 ವರ್ಷದ ಮಗುವನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ರಾತ್ರಿ ಮಲಗಿದ್ದಾಗ ಈ ಕೃತ್ಯ ನಡೆದಿದ್ದು, ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಚುರುಕುಗೊಂಡಿದೆ.
ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಕೊಲೆಗೆ ಬಳಸಿದ ಆಯುಧ ಮತ್ತು ಘಟನೆಯ ಹಿಂದಿನ ನಿಖರ ಕಾರಣಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.