
ಕರ್ನಾಟಕ ಪೊಲೀಸ್ ಇಲಾಖೆಯು ಸೈಬರ್ ಕ್ರೈಂ ಮತ್ತು ಐಟಿ ಕಾಯ್ದೆ ಪ್ರಕರಣಗಳನ್ನು ಎಫ್‌ಐಆರ್ ದಾಖಲಿಸಿದ ಕೂಡಲೇ ಮೀಸಲು ಸೈಬರ್ ಪೊಲೀಸ್ ಠಾಣೆಗಳಿಗೆ ವರ್ಗಾಯಿಸುವಂತೆ ಆದೇಶಿಸಿದೆ.
ಡಿಜಿಟಲ್ ಸಾಕ್ಷ್ಯ ಸಂರಕ್ಷಣೆ, ಮೊಬೈಲ್ ತಾಂತ್ರಿಕ ಪರಿಶೀಲನೆ ಹಾಗೂ ಬ್ಯಾಂಕ್ ಮತ್ತು ಟೆಲಿಕಾಂ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಸೆಪ್ಟೆಂಬರ್ 15ರಂದು ಹೊರಬಿದ್ದಿರುವ ಈ ಆದೇಶದ ಅನುಷ್ಠಾನವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಥವಾ ನಗರ ಪೊಲೀಸ್ ಆಯುಕ್ತರು ಮೇಲ್ವಿಚಾರಣೆ ಮಾಡಲಿದ್ದಾರೆ.