
ಕರ್ನಾಟಕ ಸರ್ಕಾರವು ಮಂಗಳವಾರ ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಡಾ. ಕೆ. ನಂದಿನಿದೇವಿ ಅವರನ್ನು ಕೆಎಸ್ಎಂಎಸ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ, ಎನ್. ಚಂದ್ರಶೇಖರ್ ಅವರನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಎಂಡಿಯಾಗಿ ನೇಮಕ ಮಾಡಲಾಗಿದೆ.
ಗರೀಮಾ ಪನ್ವಾರ್ ವಿಜಯನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ, ನೋಂಗ್ಜೈ ಮೊಹಮದ್ ಅಲಿ ಅಕ್ರಮ್ ಶಾ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ ಎಂಡಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.