
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದಕ್ಕೆ ಮಂಡ್ಯ ಭಾಗದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಆರ್ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಪ್ರಸ್ತುತ 110.28 ಅಡಿ ನೀರಿದೆ; ಜಲಾಶಯ ಪೂರ್ಣ ಭರ್ತಿಯಾಗಲು ಇನ್ನೂ 17 ಟಿಎಂಸಿ ನೀರು ಅಗತ್ಯವಿದೆ.
ಪ್ರಸ್ತುತ ಕೆಆರ್ಎಸ್ನಿಂದ 6,972 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ನೀರಿನ ಕೊರತೆಯಿಂದಾಗಿ ರೈತರು ಭತ್ತ ಮತ್ತು ಕಬ್ಬು ಬೆಳೆಯದಂತೆ ಸರ್ಕಾರ ಮನವಿ ಮಾಡಿದೆ.