
ಜುಲೈ ತಿಂಗಳಲ್ಲಿ ದೇಶದ ರಿಟೇಲ್ ಮಾರುಕಟ್ಟೆಯಲ್ಲಿ ಒಟ್ಟು 25.91 ಲಕ್ಷ ವಾಹನಗಳು ಮಾರಾಟವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 25ರಷ್ಟು ಏರಿಕೆ ಕಂಡಿದೆ.
ಪ್ರಯಾಣಿಕ ವಾಹನಗಳ ಮಾರಾಟವು ಶೇ 19ರಷ್ಟು ಹೆಚ್ಚಾಗಿ 4.16 ಲಕ್ಷಕ್ಕೆ ತಲುಪಿದ್ದು, ಒಟ್ಟು ಮಾರಾಟದಲ್ಲಿ 3.27 ಲಕ್ಷ ವಿದ್ಯುತ್ ಚಾಲಿತ ವಾಹನಗಳು ಸೇರಿವೆ.
ಜಿಎಸ್‌ಟಿ ದರ ಪರಿಷ್ಕರಣೆ ಮತ್ತು ಸುಲಭ ಸಾಲ ಸೌಲಭ್ಯಗಳು ವಾಹನಗಳ ಮಾರಾಟ ಹೆಚ್ಚಳಕ್ಕೆ ಪ್ರಮುಖ ಕಾರಣಗಳೆಂದು ವಾಹನ ವಿತರಕರ ಸಂಘಟನೆಗಳ ಒಕ್ಕೂಟ (ಎಫ್‌ಎಡಿಎ) ತಿಳಿಸಿದೆ.