
ನಮ್ಮ ಮೆಟ್ರೋದಲ್ಲಿ ಇಲ್ಲಿಯವರೆಗೆ 6 ಜನರು ಪ್ರಾಣ ಕಳೆದುಕೊಂಡಿದ್ದು, 16 ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಮತ್ತು 30 ಜನರು ಅನಧಿಕೃತವಾಗಿ ಟ್ರ್ಯಾಕ್ ಮೇಲೆ ಇಳಿದಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಬಿಎಂಆರ್ಸಿಎಲ್ ಅಧಿಕಾರಿಗಳು 2,240 ಜನರ ಮೇಲೆ ಪ್ರಕರಣ ದಾಖಲಿಸಿ, 10 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ 904 ಪ್ರಯಾಣಿಕರು ಮೆಟ್ರೋದಲ್ಲಿ ನಿಯಮ ಉಲ್ಲಂಘಿಸಿದ್ದು, 3.59 ಲಕ್ಷ ರೂ. ದಂಡ ಪಾವತಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.