
ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿದ್ದ ಪಾದಯಾತ್ರೆಯನ್ನು ಸರ್ಕಾರ ತಡೆದಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಡಿಎ ವ್ಯಾಪ್ತಿಯಲ್ಲಿ ಈಗಾಗಲೇ 35-40 ಸಾವಿರ ಖಾಲಿ ನಿವೇಶನಗಳಿದ್ದರೂ ರೈತರ ಭೂಮಿಯನ್ನು ವಶಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ಅವರು ರೈತ ವಿರೋಧಿ ಎಂದು ಟೀಕಿಸಿದ್ದಾರೆ.
ಈ ಹೋರಾಟವನ್ನು ಮುಂದುವರಿಸಲು ನಿರ್ಧರಿಸಿರುವ ಜೆಡಿಎಸ್, ಆಗಸ್ಟ್ 18ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಭೆ ನಡೆಸಲು ತೀರ್ಮಾನಿಸಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.