
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಜಾಜೂರು ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್ ಕಡ್ಡಿಗಳು ಮತ್ತು 100 ಡಿಟೋನೇಟರ್‌ಗಳನ್ನು ದಾಬಸ್ ಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಶಿವಶಂಕರ್ ಎಂಬಾತನನ್ನು ಬಂಧಿಸಲಾಗಿದ್ದು, ಅಕ್ರಮ ಕಲ್ಲುಗಣಿಗಾರಿಕೆ ಚಟುವಟಿಕೆಗಳಿಗಾಗಿ ಈ ಸ್ಪೋಟಕಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ಬಂಧಿತನ ವಿರುದ್ಧ ಸ್ಪೋಟಕ ವಸ್ತುಗಳ ಕಾಯ್ದೆ ಮತ್ತು ಬಿಎನ್‌ಎಸ್‌ಎಸ್ ಸೆಕ್ಷನ್ 288ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಗಣಿಗಾರಿಕೆಯ ಮೂಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.