
ಕೋಲಾರ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಈವರೆಗೆ ಸುಮಾರು 3500 ಎಕರೆ ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ.
ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಕಂದಾಯ ಮತ್ತು ಅರಣ್ಯ ಇಲಾಖೆಗಳ ಜಂಟಿ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದ್ದು, ಯಾವುದೇ ಬೆದರಿಕೆಗೆ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ರಾಜಕಾರಣಿಗಳು ಈ ಜಂಟಿ ಸರ್ವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಕಾರ್ಯಾಚರಣೆಯು ರೈತರಿಗೆ ವರದಾನವಾಗುತ್ತದೋ ಅಥವಾ ಶಾಪವಾಗುತ್ತದೋ ಎಂಬ ಆತಂಕ ಜಿಲ್ಲೆಯಲ್ಲಿ ಮನೆಮಾಡಿದೆ.