Health & Environment
ಶಹಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಕೂಲಿ ಕಾರ್ಮಿಕರ ಸಾವು

ಶಹಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಕೂಲಿ ಕಾರ್ಮಿಕರ ಸಾವು

prajavani1h
THE BRIEF
1

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಮಡ್ನಾಳ ಗ್ರಾಮದಲ್ಲಿ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2

ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಮತ್ತು ಹೊನ್ನ ನಿಂಗಮ್ಮ (18) ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಐವರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

3

ಹತ್ತಿ ಹೊಲದಲ್ಲಿ ಕೆಲಸ ಮುಗಿಸಿ ವಾಪಸಾಗುತ್ತಿದ್ದಾಗ ವೇಗವಾಗಿ ಬಂದ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕ ಶೇಖಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.