
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಡೆಲಿವರಿ ಬೈಕ್ ಬಳಸಿ ಕೊಕೇನ್ ಸಾಗಿಸುತ್ತಿದ್ದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿ 50 ಲಕ್ಷ ರೂ. ಮೌಲ್ಯದ 116.3 ಗ್ರಾಂ ಕೊಕೇನ್ ವಶಪಡಿಸಿಕೊಂಡಿದ್ದಾರೆ.
ಆರೋಪಿಯು ಚಾಕೊಲೇಟ್ ಬಾಕ್ಸ್ಗಳಲ್ಲಿ ಡ್ರಗ್ಸ್ ಬಚ್ಚಿಟ್ಟು ಸಾಗಿಸುತ್ತಿದ್ದನು ಮತ್ತು ಡೆಲಿವರಿ ಬಾಯ್ಗಳಿಗೆ ಪ್ರತಿ ರೈಡ್ಗೆ 300 ರೂ. ಟಿಪ್ ನೀಡುತ್ತಿದ್ದನು.
ಜುಲೈ 19ರಂದು ನಡೆದ ಕಾರ್ಯಾಚರಣೆಯಲ್ಲಿ ಈ ಜಾಲ ಪತ್ತೆಯಾಗಿದ್ದು, ಪ್ರಕರಣದಲ್ಲಿ ಶಾಮೀಲಾದ ಮತ್ತೊಬ್ಬ ಆರೋಪಿ ಅಕ್ಷಿತ್ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ಮುಂದುವರಿದಿದೆ.