
ದುಬಾರೆ ಆನೆ ಶಿಬಿರದಲ್ಲಿ ಸಂಘರ್ಷದಿಂದ ಪ್ರವಾಸಿ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಐದು ತಿಂಗಳಿಂದ ಬಂದ್ ಆಗಿದ್ದ ಹಾರಂಗಿ ಹಾಗೂ ಮತ್ತಿಗೋಡು ಆನೆ ಶಿಬಿರಗಳು ಪ್ರವಾಸಿಗರಿಗೆ ಪುನಃ ಮುಕ್ತವಾಗಿವೆ.
ಅರಣ್ಯ ಇಲಾಖೆಯು ಸಾರ್ವಜನಿಕರ ಸುರಕ್ಷತೆಗಾಗಿ ಪ್ರವಾಸಿಗರು ಆನೆಗಳಿಂದ ಕನಿಷ್ಠ 10 ಮೀಟರ್ ಅಂತರ ಕಾಯ್ದುಕೊಳ್ಳುವಂತೆ ಹೊಸ ಮಾರ್ಗಸೂಚಿ ಜಾರಿಗೆ ತಂದಿದೆ.
ಪ್ರವಾಸಿಗರು ಆನೆಗಳನ್ನು ಮುಟ್ಟುವುದು, ನೀರು ಹಾಕುವುದು, ಸ್ನಾನ ಮಾಡಿಸುವುದು ಹಾಗೂ ಹತ್ತಿರದಲ್ಲಿ ನಿಂತು ಸೆಲ್ಫಿ ತೆಗೆಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.