
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಪ್ರತಿಭಟನಾಕಾರರನ್ನು ಭಾರತದಂತೆಯೇ ಶತ್ರುಗಳೆಂದು ಪರಿಗಣಿಸುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜೂನ್ 5ರಿಂದ ಆರಂಭವಾದ ಪ್ರತಿಭಟನೆಗಳಲ್ಲಿ ಇದುವರೆಗೆ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸೋಮವಾರ ಮೀರ್‌ಪುರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 12 ನಾಗರಿಕರು ಮೃತಪಟ್ಟಿದ್ದಾರೆ.
ಪಿಒಕೆಯಲ್ಲಿ ನಾಗರಿಕರ ಮೇಲೆ ಪಾಕಿಸ್ತಾನಿ ಭದ್ರತಾ ಪಡೆಗಳು ನಡೆಸುತ್ತಿರುವ ದೌರ್ಜನ್ಯ ಮತ್ತು ಗುಂಡಿನ ದಾಳಿಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತೀವ್ರವಾಗಿ ಖಂಡಿಸಿದೆ.