
ಬೆಂಗಳೂರಿನ ಮಡಿವಾಳದ ಅಂಡರ್ಪಾಸ್ ಸಮೀಪ ನಿನ್ನೆ ರಾತ್ರಿ ಮೆಡಿಕಲ್ ಶಾಪ್ ಮಾಲೀಕ ಸುಹೇಲ್ ಎಂಬುವವರನ್ನು ನಾಲ್ವರು ದುಷ್ಕರ್ಮಿಗಳು ತಲ್ವಾರ್ನಿಂದ ಹತ್ಯೆ ಮಾಡಿದ್ದಾರೆ.
ಜನವರಿ 13ರಂದು ಬಂಡೆಪಾಳ್ಯದಲ್ಲಿ ನಡೆದಿದ್ದ ಶಬ್ಬೀರ್ ಕೊಲೆ ಪ್ರಕರಣದ ಪ್ರತೀಕಾರವಾಗಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದ್ದು, ಸುಹೇಲ್ ಅವರ ಸಹೋದರರ ಮೇಲೆ ಹಂತಕರು ದ್ವೇಷ ಹೊಂದಿದ್ದರು.
ಘಟನೆ ಸಂಬಂಧ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.