
ಬೆಂಗಳೂರು ಪಶ್ಚಿಮ ವಿಭಾಗ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 71ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.
ಬೆಂಗಳೂರು ಪಶ್ಚಿಮ ವಿಭಾಗದಾದ್ಯಂತ ಒಟ್ಟು 917 ವ್ಯಾಪಾರ ಮಳಿಗೆಗಳು, ಗ್ಯಾರೇಜ್ ಹಾಗೂ ಸಣ್ಣ ಪ್ರಮಾಣದ ಉದ್ದಿಮೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರನ್ನು ಬಳಸಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ಒಟ್ಟು 5 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.