
ಬೋಯಿಂಗ್ 787 ವಿಮಾನ ಚಾಲನಾ ತರಬೇತಿಗಾಗಿ ದೆಹಲಿಗೆ ಬಂದಿದ್ದ ಮುಂಬೈ ಮೂಲದ ಏರ್ ಇಂಡಿಯಾ ಪೈಲಟ್ ವಸಂತ್ ಕುಂಜ್‌ನ ಖಾಸಗಿ ಹೋಟೆಲ್ ಕೋಣೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಪೈಲಟ್ ಕುಟುಂಬದವರ ಕರೆಗಳಿಗೆ ಸ್ಪಂದಿಸದ ಕಾರಣ ಹೋಟೆಲ್ ಸಿಬ್ಬಂದಿ ಮಾಸ್ಟರ್ ಕೀ ಬಳಿ ಬಾಗಿಲು ತೆರೆದು ನೋಡಿದಾಗ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ.
ದೆಹಲಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ಯಾವುದೇ ಕೊಲೆ ಅಥವಾ ಸಂಚಿನ ಕೃತ್ಯ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಸೆಪ್ಟೆಂಬರ್ 12 ರಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.