
ಗುರುಗ್ರಾಮದ ಸೋಹ್ನಾದಲ್ಲಿ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕನಿಂದ ಅತ್ಯಾಚಾರಕ್ಕೊಳಗಾಗಿದ್ದ 15 ವರ್ಷದ ಬಾಲಕಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದಾಗ ಬಾಲಕಿ ಗರ್ಭಿಣಿಯಾಗಿರುವ ವಿಷಯ ಪೋಷಕರಿಗೆ ತಿಳಿದುಬಂದಿದೆ.
ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಸಿಟಿ ಸೋಹ್ನಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.