
15 ವರ್ಷದ ವೈಭವ್ ಸೂರ್ಯವಂಶಿ ಅವರ ಒಟ್ಟು ಆಸ್ತಿ ಮೌಲ್ಯ 7ರಿಂದ 10 ಕೋಟಿ ರೂಪಾಯಿಗೆ ತಲುಪಿದ್ದು, ಐಪಿಎಲ್ನಲ್ಲಿ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡವು 1.1 ಕೋಟಿ ರೂಪಾಯಿಗೆ ಖರೀದಿಸಿದ್ದ ವೈಭವ್, ಸರೀನ್ ಸ್ಪೋರ್ಟ್ಸ್, ಕಾಂಪ್ಲಾನ್ ಮತ್ತು ಗೂಗಲ್ ಪೇ ಸೇರಿದಂತೆ ಐದು ಪ್ರಮುಖ ಬ್ರ್ಯಾಂಡ್ಗಳ ರಾಯಭಾರಿಯಾಗಿದ್ದಾರೆ.
ಜಾರ್ಖಂಡ್ ಆರೋಗ್ಯ ಇಲಾಖೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ವೈಭವ್, ಪ್ರತಿ ಜಾಹೀರಾತು ಒಪ್ಪಂದಕ್ಕೆ ಸುಮಾರು 1 ಕೋಟಿ ರೂಪಾಯಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.