
ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ಅಕ್ಟೋಬರ್ 12ರಂದು ಕರಾವಳಿ ಮತ್ತು ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಸೆಕೆ ಹಾಗೂ ಆರ್ದ್ರತೆಯಿಂದ ಕೂಡಿದ ವಾತಾವರಣವಿರಲಿದ್ದು, ಕಾರವಾರದಲ್ಲಿ ಕನಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಿಲ್ಲದೆ ಒಣಹವೆ ಇರಲಿದ್ದು, ಮುಂದಿನ 2-3 ದಿನಗಳಲ್ಲಿ ಮುಂಗಾರು ಮಾರುತಗಳು ಸಂಪೂರ್ಣವಾಗಿ ನಿರ್ಗಮಿಸಲು ಪೂರಕ ವಾತಾವರಣವಿದೆ.