
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿಯಮಗಳನ್ನು ಉಲ್ಲಂಘಿಸಿ 50:50 ಅನುಪಾತದಡಿ ಹಂಚಿಕೆ ಮಾಡಲಾಗಿದ್ದ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 1,100 ಬದಲಿ ನಿವೇಶನಗಳ ಹಂಚಿಕೆಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ರದ್ದುಗೊಳಿಸಿದೆ.
ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ 2023ರ ಮಾರ್ಚ್ 14ರ ನಿರ್ದೇಶನವನ್ನು ಉಲ್ಲಂಘಿಸಿ ಮಾಡಲಾದ ಹಂಚಿಕೆಗಳನ್ನು ರದ್ದುಪಡಿಸಲಾಗಿದ್ದು, ಈಗಾಗಲೇ ನೋಂದಣಿಯಾಗಿದ್ದರೆ ಕ್ರಯಪತ್ರ ರದ್ದುಗೊಳಿಸಲು ಸಿವಿಲ್ ಕೋರ್ಟ್ನಲ್ಲಿ ದಾವೆ ಹೂಡಲು ಸೂಚಿಸಲಾಗಿದೆ.
ಈ ಆದೇಶದ ಮೇರೆಗೆ ಕೈಗೊಂಡ ಕ್ರಮಗಳ ಕುರಿತು ತಕ್ಷಣವೇ ಅನುಪಾಲನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಮತ್ತು ವಿಫಲವಾದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.