
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ 'ಮುರಸು' ಚಂಡಮಾರುತವು ಮಂಗಳವಾರ ಬೆಳಿಗ್ಗೆ 3.30ರಿಂದ 5.30ರ ನಡುವೆ ಆಂಧ್ರಪ್ರದೇಶದ ನೆಲ್ಲೂರು ಮತ್ತು ನರಸಾಪುರದ ನಡುವೆ ಒಂಗೋಲ್ ಪಟ್ಟಣ ದಾಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಚಂಡಮಾರುತದಿಂದ ರಾಜ್ಯದ 15 ಜಿಲ್ಲೆಗಳ 52,459 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳಿಗೆ ಹಾನಿಯಾಗಿದ್ದು, 312 ಮನೆಗಳು ಜಖಂಗೊಂಡಿವೆ; 10,805 ಮಂದಿಯನ್ನು 171 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತನಾಡಿ, ಕೇಂದ್ರದಿಂದ ಅಗತ್ಯ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.