
ಕೊಡಗು ಜಿಲ್ಲೆಯಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪಲು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ದಶಮಂಟಪಗಳ ಐತಿಹಾಸಿಕ ಮೆರವಣಿಗೆಯಿಂದಾಗಿ ರಸ್ತೆಗಳಲ್ಲಿ ಭಾರೀ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಸೋಮಶೇಖರ್ ಅವರ ಆದೇಶದಂತೆ ಕೊಡಗು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ರಜೆ ಅನ್ವಯಿಸುತ್ತದೆ.