
ಜಮ್ಮು-ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಹರಿಗನ್ವಾನ್ ಬಳಿ ಅಮರನಾಥ ಯಾತ್ರಿಕರಿದ್ದ ಬಸ್ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಪರಿಣಾಮ 39 ಯಾತ್ರಿಕರು ಗಾಯಗೊಂಡಿದ್ದಾರೆ.
ಅಪಘಾತದ ನಂತರ ಸ್ಥಳೀಯರು, ಪೊಲೀಸ್, ಐಟಿಬಿಪಿ, ಸಿಆರ್‌ಪಿಎಫ್ ಮತ್ತು ಸೇನಾ ಪಡೆಗಳು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜುಲೈ 2ರಂದು ಆರಂಭವಾದ ಈ ವರ್ಷದ ಯಾತ್ರೆಯಲ್ಲಿ ಇದುವರೆಗೆ 4.15 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು, ಯಾತ್ರೆಯು ಆಗಸ್ಟ್ 28ರಂದು ಮುಕ್ತಾಯಗೊಳ್ಳಲಿದೆ.