
ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 9ರಂದು ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, 64ರಿಂದ 115 ಮಿ.ಮೀ ವರೆಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಮಳೆಯ ಅಬ್ಬರವಿರಲಿದೆ.