
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ (ಕೆಪಿಎಸ್) ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೊದಲ್ಲಿ ಒಬ್ಬ ವಿದ್ಯಾರ್ಥಿ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿದ್ದರೆ, ಇನ್ನುಳಿದ ಇಬ್ಬರು ವಿದ್ಯಾರ್ಥಿಗಳು ಪೈಪ್ ಮೂಲಕ ನೀರು ಹಾಕುತ್ತಿರುವುದು ಕಂಡುಬಂದಿದೆ.
ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದಕ್ಕೆ ಪೋಷಕರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಮಾಹಿತಿ ಪಡೆಯಲು ಮುಖ್ಯ ಶಿಕ್ಷಕ ಗಂಗಾಧರಯ್ಯ ಅವರಿಗೆ ಕರೆ ಮಾಡಿದರೆ ಅವರು ಸ್ವೀಕರಿಸಿಲ್ಲ.