ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಸಂಸದೀಯ ಪದ ಬಳಸಿದ್ದು, ಆಡಳಿತ ಪಕ್ಷದ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು.
ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಸಚಿವ ಕಿರಣ್ ರಿಜಿಜು ಆರೋಪಿಸಿ ಕ್ಷಮೆಗೆ ಆಗ್ರಹಿಸಿದರು.
ಸ್ಪೀಕರ್ ಓಂ ಬಿರ್ಲಾ ಅವರು ರಾಹುಲ್ ಗಾಂಧಿ ಬಳಸಿದ ಆಕ್ಷೇಪಾರ್ಹ ಪದವನ್ನು ಕಲಾಪದ ದಾಖಲೆಗಳಿಂದ ತೆಗೆದುಹಾಕಿದ್ದು, ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.