
ಸರ್ಕಾರದ ಗುಟ್ಕಾ ನಿಷೇಧ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ನೀರು ಹಂಚಿಕೆ ನಿರ್ಧಾರ ವಿರೋಧಿಸಿ ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು 65-70 ಕಿಲೋಮೀಟರ್ ಪಾದಯಾತ್ರೆ ನಡೆಸಿದ್ದು, ಸೋಮವಾರ ದಾವಣಗೆರೆ ಬಂದ್‌ಗೆ ಕರೆ ನೀಡಿದ್ದಾರೆ.
ಸರ್ಕಾರ ಆದೇಶಗಳನ್ನು ಹಿಂಪಡೆಯದಿದ್ದರೆ ರಾಜ್ಯಾದ್ಯಂತ ದೊಡ್ಡ ಹೋರಾಟ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.