
ಶಿವಮೊಗ್ಗದ ಅಂಬೇಡ್ಕರ್ ವಸತಿ ಶಾಲೆಯ 12 ವರ್ಷದ ವಿದ್ಯಾರ್ಥಿನಿ ಶ್ವೇತಾ ಜ್ವರದಿಂದ ಬಳಲಿ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಲು ಅಗತ್ಯವಿದ್ದ ಟ್ಯೂಬ್ ಸಿಗದ ಕಾರಣ ಬಾಲಕಿಯ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ವರದಿಯಾಗಿದೆ.
ಕಳೆದ ಆರು ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಕೋಮಾಕ್ಕೆ ಜಾರಿ ಕೊನೆಯುಸಿರೆಳೆದಿದ್ದಾಳೆ.